ಗ್ರಾಪಂ ಸಾರ್ವತ್ರಿಕ ಚುನಾವಣೆ: ನಿಷೇಧಾಜ್ಞೆ

Update: 2020-12-21 14:57 GMT

ಮಂಗಳೂರು, ಡಿ.21: ಗ್ರಾಪಂಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಡಿ.22ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.

ಡಿ.22ರಂದು ಸಂಜೆ 5 ಗಂಟೆಯವರೆಗೆ ಹಾಗೂ ಎರಡನೇ ಹಂತದ ಚುನಾವಣೆ ಡಿ.27ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ನಡೆಯಲಿದೆ. ಇದರಿಂದ ಡಿ.25ರಂದು ಸಂಜೆ 5ರಿಂದ 27ರಂದು ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಐಪಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಹಾಗೂ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರ ಅಂಟಿಸುವುದರಿಂದ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವವುದು ನಿಷಿದ್ಧ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News