ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

Update: 2020-12-22 13:48 GMT

ಉಡುಪಿ, ಡಿ.22: ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರ ದೊಂದಿಗೆ ಉಡುಪಿ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ ಡಿ.23ರ ಬುಧವಾರ ಬೆಳಗ್ಗೆ 9:30ಕ್ಕೆ ಅಜ್ಜರಕಾಡು ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಉದ್ಘಾಟಿಸಲಿದ್ದು, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ.ಬಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News