ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

Update: 2020-12-22 15:10 GMT

ಮಂಗಳೂರು, ಡಿ.22: ಇಂಗ್ಲೆಂಡ್ ರಾಷ್ಟ್ರದಲ್ಲಿ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಪತ್ತೆಯಾಗಿದ್ದು, ಇದರ ಹರಡುವಿಕೆ ತಡೆ ಯಲು ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಿಮಾನವನ್ನು ಈಗಾಗಲೇ ರದ್ದುಪಡಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಮುನ್ನೆಚ್ಚರಿಕಾ ಕ್ರಮ ಗಳನ್ನು ಅನುಸರಿಸಲಾಗುವುದು.

ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು.

ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19 (9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ (9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News