ಕೊಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯಾವುದೇ ತಡೆಯಿಲ್ಲ: ಕತರ್

Update: 2020-12-23 17:30 GMT

ಮಾಸ್ಕೋ (ರಶ್ಯ), ಡಿ. 23: ಕೊಲ್ಲಿ ಬಿಕ್ಕಟ್ಟನ್ನು ನಿಭಾಯಿಸುವ ನಿಟ್ಟಿನಲ್ಲಿ ರಾಜಕೀಯ ಮಟ್ಟದಲ್ಲಿ ಯಾವುದೇ ಅಡೆತಡೆಗಳಿಲ್ಲ ಎಂದು ಕತರ್ ವಿದೇಶ ಸಚಿವ ಶೇಖ್ ಮುಹಮ್ಮದ್ ಬಿನ್ ಅಬ್ದುಲ್‌ರಹಮಾನ್ ಅಲ್ ಥಾನಿ ಹೇಳಿದ್ದಾರೆ.

ಖತರ್ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಸೌದಿ ಅರೇಬಿಯ, ಯುನೈಟೆಡ್ ಅರಬ್ ಎಮಿರೇಟ್ಸ್, ಬಹರೈನ್ ಮತ್ತು ಈಜಿಪ್ಟ್ ದೇಶಗಳು 2017ರ ಜೂನ್‌ನಲ್ಲಿ ಆ ದೇಶದ ವಿರುದ್ಧ ರಾಜತಾಂತ್ರಿಕ, ವ್ಯಾಪಾರ ಮತ್ತು ಪ್ರಯಾಣ ಬಹಿಷ್ಕಾರವನ್ನು ಘೋಷಿಸಿದ್ದವು.

ರಶ್ಯ ರಾಜಧಾನಿ ಮಾಸ್ಕೋದಲ್ಲಿ ಬುಧವಾರ ರಶ್ಯ ವಿದೇಶ ಸಚಿವ ಸರ್ಗಿ ಲವ್ರೊವ್ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲ್ಲಿ ಬಿಕ್ಕಟ್ಟನ್ನು ಮಾತುಕತೆಯ ಮೂಲಕ, ಸಾರ್ವಭೌಮತೆಯನ್ನು ಗೌರವಿಸುವ ಮೂಲಕ ಹಾಗೂ ಇತರ ದೇಶಗಳ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ನಡೆಸದಿರುವ ಮೂಲಕ ಬಗೆಹರಿಸಬಹುದಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News