ಪಿಲಿಕುಳ: ಡಿ.25ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ
Update: 2020-12-24 16:24 GMT
ಮಂಗಳೂರು, ಡಿ.24: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಡಿ.25ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಿದೆ.
ಸಾರ್ವಜನಿಕರು ಸುರಕ್ಷಿತ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರನ್ನು ಕಡ್ಡಾಯವಾಗಿ ಬಳಸಿ ವೀಕ್ಷಿಸಬಹುದಾಗಿದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.