ಎಸ್‌ಐಓ ಉಡುಪಿ ಜಿಲ್ಲಾಧ್ಯಕ್ಷರಾಗಿ ಅರ್ಬಾಝ್ ಆಯ್ಕೆ

Update: 2020-12-26 11:59 GMT

ಉಡುಪಿ, ಡಿ.26: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ 2021ನೆ ಸಾಲಿನ ನೂತನ ಜಿಲ್ಲಾಧ್ಯಕ್ಷರಾಗಿ ಉಡುಪಿಯ ಅರ್ಬಾಝ್ ಅಹಮದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತೋನ್ಸೆ ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್‌ನಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಪ್ರಕ್ರೀಯೆ ನಡೆಯಿತು. ಅರ್ಬಾಝ್ ಇಂಜಿನಿಯರ್ ಪದವೀಧರರಾಗಿದ್ದು ಪ್ರಸ್ತುತ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಹೂಡೆಯ ಅಸ್ಜದ್ ಅವರನ್ನು ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News