ಕೋವಿಡ್ ಪರೀಕ್ಷೆ ಕಡ್ಡಾಯ:ಡಿಎಚ್‌ಒ

Update: 2020-12-27 15:31 GMT

ಮಂಗಳೂರು, ಡಿ.27: ಕೋವಿಡ್-19 ಸೋಂಕಿನ ಎರಡನೇ ಅಲೆಯ ರೂಪಾಂತರಗೊಂಡ ವೈರಸ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣ ಅಥವಾ ನವ ಮಂಗಳೂರು ಬಂದರು ಮೂಲಕ ಜಿಲ್ಲೆಗೆ ಆಗಮಿಸುತ್ತಿರುವ ಪ್ರಯಾಣಿಕರು 72 ಗಂಟೆ ಯೊಳಗೆ ಕೋವಿಡ್-19 ಪರೀಕ್ಷೆಗೆ ಒಳಪಟ್ಟು ನೆಗೆಟಿವ್ ವರದಿಯೊಂದಿಗೆ ಬರುವುದು ಕಡ್ಡಾಯವಾಗಿದೆ ಎಂದು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಡಿ.26ರಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರ ಕೋವಿಡ್-19 ಆರ್‌ಟಿಪಿಸಿಆರ್ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಪರೀಕ್ಷೆ ಮಾಡಿಸಿ ವರದಿ ಬರುವವರೆಗೆ ಹೋಂ ಕ್ವಾರಂಟೈನ್‌ನಲ್ಲಿರಬೇಕು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News