ದ.ಕ. ಜಿಲ್ಲೆ: 35 ಮಂದಿಗೆ ಕೊರೋನ ಪಾಸಿಟಿವ್

Update: 2020-12-29 15:09 GMT

ಮಂಗಳೂರು, ಡಿ. 29: ದ.ಕ.ಜಿಲ್ಲೆಯಲ್ಲಿ ಮಂಗಳವಾರ 35 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 32,818 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಮಂಗಳವಾರ 34 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ 31,713 ಮಂದಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 4,57,223 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 4,24,405 ಮಂದಿಯ ವರದಿ ನೆಗೆಟಿವ್ ಮತ್ತು 32,818 ಮಂದಿಯ ವರದಿ ಪಾಸಿಟಿವ್ ಆಗಿದೆ. ಅಲ್ಲದೆ 373 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 732 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 18,773 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 19,94,178 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News