ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

Update: 2020-12-29 15:42 GMT

ಮಂಗಳೂರು, ಡಿ.29: ದ.ಕ.ಜಿಲ್ಲೆಯ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿ.30ರ ಮಧ್ಯರಾತ್ರಿ 12 ಗಂಟೆಯವರೆಗೆ ಸೆ.144ರಂತೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ಮತ್ತು ಮಾರಕಾಯುಧ ಬಳಸುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ,ಸಭೆ-ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಚುನಾವಣಾ ಕರ್ತವ್ಯ ದಲ್ಲಿ ನಿರತರಾಗಿರುವ ಸಿಬ್ಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News