ಉಡುಪಿ: ಗುರುವಾರ 20 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

Update: 2020-12-31 13:22 GMT

ಉಡುಪಿ, ಡಿ.31: ಕಳೆದ ಮಾರ್ಚ್ ತಿಂಗಳಿನಿಂದ ಪ್ರಾರಂಭಿಸಿ ವರ್ಷವಿಡೀ ಜಗತ್ತನ್ನು ಬೆಂಬಿಡದೆ ಕಾಡಿದ ಕೋವಿಡ್‌ಗೆ 2020ನೇ ವರ್ಷದ ಕೊನೆಯ ದಿನದಂದು ಜಿಲ್ಲೆಯಲ್ಲಿ ಒಟ್ಟು 20 ಮಂದಿ ಕೊರೋನ ಸೋಂಕಿತರು ಪತ್ತೆಯಾಗಿದ್ದಾರೆ. ದಿನದಲ್ಲಿ ಎಂಟು ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, ಸದ್ಯ 74 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಐವರು ಪುರುಷರು ಮತ್ತು ಹಾಗೂ 15 ಮಂದಿ ಮಹಿಳೆಯಾಗಿದ್ದಾರೆ. ಎಲ್ಲಾ ಐವರು ಪುರುಷರು ಹಾಗೂ 14 ಮಂದಿ ಮಹಿಳೆಯಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ. ಒಟ್ಟು 18 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿದ್ದರೆ, ಇಬ್ಬರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಎಂಟು ಮಂದಿ ಗುಣಮುಖ: ಬುಧವಾರ ಜಿಲ್ಲೆಯ ಎಂಟು ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,797ಕ್ಕೇರಿದೆ. ಸದ್ಯ 74 ಮಂದಿ ಕೆವಿಡ್‌ಗೆ ಸಕ್ರಿಯರಿದ್ದಾರೆ ಎಂದರು.

1730 ನೆಗೆಟಿವ್: ಬುಧವಾರ ಒಟ್ಟು 1751 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1730 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದ 21 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,059 ಆಗಿದೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಬುದವಾರದವರೆಗೆ ಒಟ್ಟು 2,85,864 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,62,805 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,059 ಮಂದಿ ಈವರೆಗೆ ಪಾಸಿಟಿವ್ ಬಂದಿದ್ದರೆ, 22,797 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್ ನಿಂದ ಯಾರೂ ಮೃತಪಟ್ಟಿಲ್ಲ. ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 188 ಎಂದು ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News