ಉಡುಪಿ: ಬೀಚ್‌ಗೆ ಪ್ರವೇಶ ನಿಷೇಧ

Update: 2020-12-31 13:25 GMT

ಉಡುಪಿ, ಡಿ.31: ಹೊಸ ವರ್ಷದ ಸಂದರ್ಭದಲ್ಲಿ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಡಿ.31 ಸಂಜೆ 6:00ರಿಂದ ಶುಕ್ರವಾರ (ಜ.1) ಮುಂಜಾನೆ 6:00ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಆದರೆ ಈ ನಿಷೇಧ ಸ್ಥಳೀಯ ಮೀನುಗಾರರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News