ವಿದ್ಯಾಪೋಷಕ್ ಸಹಾಯಧನ ವಿತರಣೆ; ಸಾಹಿತಿ ನೇಮಿಚಂದ್ರರಿಂದ ಉಪನ್ಯಾಸ

Update: 2021-01-02 14:56 GMT

ಉಡುಪಿ, ಜ.2: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ನ 1050 ವಿದ್ಯಾರ್ಥಿಗಳಿಗೆ ಸುಮಾರು 70 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆಯಾಗಲಿದೆ. ವಿನಮ್ರ ಸಹಾಯಧನ ವಿತರಣಾ ಸಮಾರಂಭ ಜ.3ರ ಬೆಳಗ್ಗೆ 9:30ರಿಂದ ಅಪರಾಹ್ನ 1:30ರ ತನಕ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಲಿದೆ.

ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥರು ಪೂರ್ವಾಹ್ನ 9:30ಕ್ಕೆ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಅಪರಾಹ್ನ 12:30ಕ್ಕೆ ಪರ್ಯಾಯ ಶ್ರೀ ಅದಮಾರು ಮಠದ ಶ್ರೀಈಶಪ್ರಿಯತೀರ್ಥರು ಸಹಾಯಧನ ವಿತರಣೆ ಮಾಡಲಿದ್ದಾರೆ. ಶಾಸಕರಾದ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡದ ಖ್ಯಾತ ಕಾದಂಬರಿಕಾರ್ತಿ, ಲೇಖಕಿ ನೇಮಿಚಂದ್ರ ಅವರು ಬೆಳಗ್ಗೆ 10:30ಕ್ಕೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮವು ಸಿ4ಯು ಚಾನೆಲ್‌ನಲ್ಲಿ ನೇರ ಪ್ರಸಾರಗೊಳ್ಳಲಿದೆ ಎಂದು ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News