ಜ.6 : ಪೊಳಲಿ ಶೀನಪ್ಪ ಹೆಗ್ಗಡೆ ಪ್ರಶಸ್ತಿ ಪ್ರದಾನ

Update: 2021-01-04 16:23 GMT

ಉಡುಪಿ, ಜ.4: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಸಹಯೋಗ ದಲ್ಲಿ ಪೊಳಲಿ ಶೀನಪ್ಪಹೆಗ್ಡೆ ಮತ್ತು ಎಸ್.ಆರ್.ಹೆಗ್ಡೆ ಹೆಸರಲ್ಲಿ ಜಂಟಿಯಾಗಿ ನೀಡಲಾಗುವ ಪ್ರಶಸ್ತಿ ಪ್ರದಾನ ಸಮಾರಂಭ ಜ.6ರ ಬೆಳಿಗ್ಗೆ 10:30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಹೆಯ ಕುಲಸಚಿವ ಡಾ. ನಾರಾಯಣ ಸಭಾಹಿತ್ ಭಾಗವಹಿಸಲಿದ್ದಾರೆ. ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಟಿ.ಕೆ. ರವೀಂದ್ರನ್ ಪ್ರಶಸ್ತಿ ಪುರಸ್ಕೃತರಾದ ಡಾ.ತುಕಾರಾಮ ಪೂಜಾರಿ ಇವರ ಅಭಿನಂದನಾ ಭಾಷಣ ಮಾಡಲಿರುವರು.

ಮಂಗಳೂರು ವಿವಿ ಇತಿಹಾಸ ವಿಭಾಗದ ಪ್ರೊಪೆಸರ್ ಡಾ.ಕೆ.ಎಂ. ಲೋಕೇಶ್ ಇವರು ‘ವಿಕಾಸಗೊಳ್ಳುತ್ತಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಕಥನ’ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ನಾಯ್ಕಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News