ಉಡುಪಿ: ನಾಳೆ ರಾಷ್ಟ್ರೀಯ ಯುವದಿನಾಚರಣೆ

Update: 2021-01-11 16:39 GMT

ಉಡುಪಿ, ಜ.11: ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ರಾಷ್ಟ್ರೀಯ ಯುವದಿನಾಚರಣೆ ಹಾಗೂ ವೌಲಿಕ ಶಿಕ್ಷಣ ಶಿಬಿರದ ಪ್ರಾರಂಭೋತ್ಸವ ಜ.12ರ ಮಂಗಳವಾರ ಬೆಳಗ್ಗೆ 9:30ರಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎಂಜಿಎಂ ಕಾಲೇಜು ಉಡುಪಿ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜು ಅಜ್ಜರಕಾಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀವೀರೇಶಾನಂದ ಸರಸ್ವತಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News