ಜಾಗತಿಕ ಬಂಟ ಪ್ರತಿಷ್ಠಾನ ಪ್ರಶಸ್ತಿಗೆ ರಾಜೀವ ಶೆಟ್ಟಿ ಹೊಸಂಗಡಿ ಆಯ್ಕೆ

Update: 2021-01-12 17:17 GMT

ಮಂಗಳೂರು, ಜ.12: ಜಾಗತಿಕ ಬಂಟ ಪ್ರತಿಷ್ಠಾನವು ಡಾ.ಡಿ.ಕೆ.ಚೌಟ ದತ್ತಿನಿಧಿ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ 2020-21ನೇ ಸಾಲಿನಲ್ಲಿ ಬಡಗು ತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ರಾಜೀವ ಶೆಟ್ಟಿ ಹೊಸಂಗಡಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ , ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಮತ್ತು ನಿವೃತ್ತ ಪ್ರಾಚಾರ್ಯ ಪ್ರೊ.ಜಿ.ಆರ್. ರೈ ಅವರನ್ನೊಳಗೊಂಡ ಸಮಿತಿಯು ಈ ಆಯ್ಕೆ ಮಾಡಿದೆ.

ಬಡಗುತಿಟ್ಟಿನ ಹೆಸರಾಂತ ಕಮಲಶಿಲೆ,ಪೆರ್ಡೂರು, ಅಮೃತೇಶ್ವರಿ, ಸೌಕೂರು, ಬಚ್ಚಗಾರು, ಸಾಲಿಗ್ರಾಮ ಮತ್ತು ಮಂದರ್ತಿ ಮೇಳಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ 60ರ ಹರೆಯದ ರಾಜೀವ ಶೆಟ್ಟಿ ಕುಂದಾಪುರ ತಾಲೂಕಿನ ಹೊಸಂಗಡಿ ಕೆಳಬಾಗಿ ಮನೆಯಲ್ಲಿ ಕುಟುಂಬದೊಂದಿಗೆ ನೆಲೆಸಿದ್ದಾರೆ.

ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿಯು 20,000 ರೂ.ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಜ.23ರಂದು ನಗರದ ಮೋತಿ ಮಹಲ್ ಸಭಾಂಗಣದಲ್ಲಿ ಜರುಗುವ ಜಾಗತಿಕ ಬಂಟ ಫೌಂಡೇಶನ್ ಟ್ರಸ್ಟ್ನ 24ನೇ ವಾರ್ಷಿಕ ಸಮಾವೇಶದಲ್ಲಿ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡುವರೆಂದು ಪ್ರತಿಷ್ಠಾನದ ಕಾರ್ಯದರ್ಶಿ ವೈ.ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News