ಉಡುಪಿ: ಮುಜರಾಯಿ ಇಲಾಖಾ ದೇವಾಲಯಗಳ ಅರ್ಚಕ ಸಮಾವೇಶ

Update: 2021-01-16 14:36 GMT

ಉಡುಪಿ, ಜ.16: ಉಡುಪಿ ಜಿಲ್ಲಾ ಮುಜರಾಯಿ ಇಲಾಖಾ ದೇವಾಲಯ ಗಳ ಅರ್ಚಕ ಸಂಘದ ವತಿಯಿಂದ ಜಿಲ್ಲಾ ಧಾರ್ಮಿಕ ಪರಿಷತ್‌ನ ಸಹಯೋಗ ದೊಂದಿಗೆ ಉಡುಪಿ ಜಿಲ್ಲಾ ಮುಜರಾಯಿ ಇಲಾಖಾ ವ್ಯಾಪ್ತಿಯ ದೇವಾಲಯ ಗಳ ಅರ್ಚಕ ಸಮಾವೇಶ ಇಂದು ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿ ತೀರ್ಥ ವೇದಿಕೆಯಲ್ಲಿ ನಡೆಯಿತು.

ಅರ್ಚಕರು ನಮ್ಮ ಸಂಸ್ಕಾರವನ್ನು ಉಳಿಸಿಕೊಳ್ಳುವಲ್ಲಿ ಹೆಚ್ಚಿನ ಮುತುವರ್ಜಿ ತೋರಿಸಬೇಕಿದೆ. ದೇವಸ್ಥಾನಕ್ಕೆ ಬರುವ ಭಕ್ತರು ಸೇರಿದಂತೆ ಎಲ್ಲರಿಂದಲೂ ಗೌರವ ಪಡೆಯುವಂತಾಗಬೇಕು ಎಂದು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅಚಕರಿಗೆ ಕರೆ ನೀಡಿದರು.

ಜಿಲ್ಲಾ ಮಟ್ಟದ ಅರ್ಚಕರ ಸಮಾವೇಶವನ್ನು ಪರ್ಯಾಯ ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವಪ್ರಿಯ ತೀರ್ಥರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಸೂರ್ಯನಾರಾಯಣ ಭಟ್ ಕಶೆಕೋಡಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅದ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಡಾ.ನಾರಾಯಣ ಶೆಣೈ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಆರ್.ಶೇಷಪ್ಪ, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರು ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಅರ್ಚಕರಿಗೆ ಉಪಯುಕ್ತ ಆರೋಗ್ಯ ಮಾಹಿತಿ, ದೇವಸ್ಥಾನದ ವಿವಿಧ ಆಚರಣೆಗಳು ಹಾಗೂ ಅರ್ಚಕರ ಕರ್ತವ್ಯಗಳ ಕುರಿತಂತೆ ವಿಶೇಷ ಉಪನ್ಯಾಸ ವನ್ನು ಏರ್ಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News