ಪೊಲೀಸರಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ

Update: 2021-01-16 16:07 GMT

ಉಡುಪಿ, ಜ.16: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಶಾಖೆ ಹಾಗೂ ಉಡುಪಿ ಪೋಲಿಸ್ ತರಬೇತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಇಂದು ಉಡುಪಿ ಚಂದು ಮೈದಾನ ಸಭಾ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಉಡುಪಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ ವಹಿಸಿದ್ದರು.

ತರಬೇತದಾರರಾಗಿ ಅಶ್ವಿನ್ ಕುಮಾರ್, ಗೌತಮ್ ಹಾಗೂ ಗ್ಲೋರಿಯಾ ಜನೀಫರ್ ಭಾಗವಹಿಸಿದ್ದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಜಯರಾಮ ಆಚಾರ್ಯ ಸಾಲಿಗ್ರಾಮ, ಪೋಲಿಸ್ ತರಬೇತಿ ಶಿಕ್ಷಕ ಬಾಲಸುಬ್ರಹ್ಮಣ್ಯಂ ಉಪಸ್ಥಿತರಿದ್ದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅನುಷಾ ಹಾಗು ಸುನೀತಾ ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News