ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ
Update: 2021-01-21 15:04 GMT
ಉಡುಪಿ, ಜ.21: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿ ಯಿಂದ ಉಡುಪಿ ನಗರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ 15 ಪ್ರಕರಣಗಳನ್ನು ದಾಖಲಿಸಿ, ಒಟ್ಟು 3,700 ರೂ. ದಂಡ ವಸೂಲಿ ಮಾಡಲಾಯಿತು.
ಉಡುಪಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಆಶ್ರಯದಲ್ಲಿ ಉಡುಪಿ ನಗರ ವ್ಯಾಪ್ತಿ ಪ್ರದೇಶದಲ್ಲಿ ಗುಲಾಬಿ ಆಂದೋಲನ ಮತ್ತ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ, ಹಿರಿಯ ಆರೋಗ್ಯ ಸಹಾಯಕ ದೇವಪ್ಪಪಟಗರ್, ಉಡುಪಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ವಿಶ್ವನಾಥ ಬಾಯರಿ ಹಾಗೂ ಇತರರು ಪಾಲ್ಗೊಂಡಿದ್ದರು.