ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆ

Update: 2021-03-30 18:01 GMT

ಹೊಸದಿಲ್ಲಿ, ಮಾ. 30: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಹೊಸದಿಲ್ಲಿಯ ಆಲ್ ಇಂಡಿಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್‌ನಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ.

‘‘ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿರುವುದಕ್ಕೆ ನಾನು ವೈದ್ಯರನ್ನು ಅಭಿನಂದಿಸುತ್ತೇನೆ’’ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ. ‘‘ರಾಷ್ಟ್ರಪತಿ ಅವರ ಆರೋಗ್ಯ ವಿಚಾರಿಸಲು ಏಮ್ಸ್‌ನ ನಿರ್ದೇಶಕ (ರಣದೀಪ್ ಗುಲೆರಿಯಾ) ಅವರೊಂದಿಗೆ ಮಾತನಾಡಿದ್ದೇನೆ. ಅವರ ಯೋಗಕ್ಷೇಮ ಹಾಗೂ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ’’ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ. ಎದೆಯ ಅಸ್ವಸ್ಥತೆಯ ಹಿನ್ನೆಲೆಯಲ್ಲಿ 75 ವರ್ಷದ ರಾಷ್ಟ್ರಪತಿ ಅವರನ್ನು ಮಾರ್ಚ್ 26ರಂದು ಸೇನಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅವರಿಗೆ ದಿನನಿತ್ಯ ಪರಿಶೀಲನೆ ನಡೆಸಲಾಗಿತ್ತು ಹಾಗೂ ನಿಗಾದಲ್ಲಿ ಇರಿಸಲಾಗಿತ್ತು. ಮರು ದಿನ ಅವರನ್ನು ಬೈಪಾಸ್ ಶಸ್ತ್ರಚಿಕಿತ್ಸೆಗಾಗಿ ಏಮ್ಸ್‌ಗೆ ವರ್ಗಾಯಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News