ದೇಶದಲ್ಲೇ ಮೊದಲ ಬಾರಿಗೆ ರಾಜಸ್ಥಾನ ಸರಕಾರದಿಂದ ಜನರಿಗೆ ಆರೋಗ್ಯ ವಿಮೆ
Update: 2021-04-01 18:07 GMT
ಜೈಪುರ, ಎ. 1: ರಾಜಸ್ಥಾನ ಸರಕಾರ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯ ನೋಂದಣಿ ಆರಂಭಿಸುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಮೌಲ್ಯದ ತನ್ನ ನಗದು ರಹಿತ ‘ಮೆಡಿಕ್ಲೈಮ್’ ಯೋಜನೆಗೆ ಗುರುವಾರ ಚಾಲನೆ ನೀಡಿದೆ.
ಈ ಯೋಜನೆ ಅಡಿಯಲ್ಲಿ ನೋಂದಣಿ ಆರಂಭಿಸುವುದರೊಂದಿಗೆ ರಾಜಸ್ಥಾನ ತನ್ನೆಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ನೀಡುತ್ತಿರುವ ದೇಶದ ಮೊದಲ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ 2021-22ರ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದದರು. ಈ ಯೋಜನೆ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬ ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆ ಪಡೆಯಲಿದೆ. ‘‘ಪ್ರತಿ ವರ್ಷ ಪ್ರತಿ ಕುಟುಂಬ 5 ಲಕ್ಷ ರೂ. ಆರೋಗ್ಯ ವಿಮೆ ಪಡೆಯುವ ದೇಶದ ಮೊದಲ ರಾಜ್ಯ ರಾಜಸ್ಥಾನ. ಜನರು ನೋಂದಣಿ ಮಾಡಿಕೊಳ್ಳಬಹುದು ಹಾಗೂ ನಗದು ರಹಿತ ಚಿಕಿತ್ಸೆ ಪಡೆಯಬಹುದು’’ ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಸರಕಾರದ ನಗದು ರಹಿತ ಚಿಕಿತ್ಸೆ ರಾಜ್ಯದಲ್ಲಿ ಇಂದಿನಿಂದ ಆರಂಭವಾಗಲಿದೆ ಎಂದು ಗೆಹ್ಲೋಟ್ ಮಾಹಿತಿ ನೀಡಿದ್ದಾರೆ.