ಮಾವೋವಾದಿಗಳೊಂದಿಗೆ ಎನ್‌ಕೌಂಟರ್‌: ಐವರು ಭದ್ರತಾ ಸಿಬ್ಬಂದಿ ಮೃತ್ಯು

Update: 2021-04-03 12:00 GMT

ರಾಯ್ ಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳೊಂದಿಗಿನ ಎನ್ ಕೌಂಟರ್ ನಲ್ಲಿ  ಐವರು ಭದ್ರತಾ ಸಿಬ್ಬಂದಿಗಳು ಮೃತಪಟ್ಟಿದ್ದಾರೆ, ಕರ್ತವ್ಯದಲ್ಲಿದ್ದಾಗ ಇನ್ನು ಕೆಲವರು ಗಾಯಗೊಂಡಿದ್ದಾರೆ.

 "ಕರ್ತವ್ಯದಲ್ಲಿದ್ದ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮಾವೋವಾದಿಗಳು ಸಹ ಕೊಲ್ಲಲ್ಪಟ್ಟಿದ್ದಾರೆ. ಮಾವೋವಾದಿಗಳು  ಸಾಕಷ್ಟು ಹಾನಿ ಅನುಭವಿಸಿದ್ದಾರೆ" ಎಂದು ರಾಜ್ಯದ ಹಿರಿಯ ಅಧಿಕಾರಿ ಅಶೋಕ್ ಜುನೇಜ ಹೇಳಿದ್ದಾರೆ.

ಸಿಆರ್‌ಪಿಎಫ್‌ನ ಎಲೈಟ್ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆ್ಯಕ್ಷನ್) ಘಟಕ, ಜಿಲ್ಲಾ ರಿಸರ್ವ್ ಗಾರ್ಡ್  (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಯ ಭದ್ರತಾ ಸಿಬ್ಬಂದಿ ಮಾವೋವಾದಿ ವಿರೋಧಿ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದವು.

ಇತ್ತೀಚೆಗೆ ಛತ್ತೀಸ್ ಗಡದ ನಾರಾಯಣಪುರ ಜಿಲ್ಲೆಯಲ್ಲಿ ಮಾವೋವಾದಿಗಳು 27 ಡಿಆರ್‌ಜಿ (ಜಿಲ್ಲಾ ರಿಸರ್ವ್ ಗಾರ್ಡ್) ಪಡೆಗಳನ್ನು ಹೊತ್ತ ಬಸ್ಸನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿ, 14 ಮಂದಿ ಗಾಯಗೊಂಡ ಘಟನೆ ನಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News