ದೇಶದಲ್ಲಿ ಕೋವಿಡ್-19 ಲಸಿಕೆಗಳ ಕೊರತೆ ಇಲ್ಲ: ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್
ಹೊಸದಿಲ್ಲಿ: ಕೋವಿಡ್-19 ಲಸಿಕೆಗಳ ಕೊರತೆಯ ಬಗ್ಗೆ ಕೇಂದ್ರ ಸರಕಾರಕ್ಕೆ ನಾವು ಎಸ್ ಒ ಎಸ್ ಎಚ್ಚರಿಕೆಯನ್ನು ರವಾನಿಸಿದ್ದೇವೆ ಎಂದು ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶ ಸರಕಾರಗಳು ಬಹಿರಂಗಪಡಿಸಿದ ಬೆನ್ನಿಗೇ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್, ದೇಶದಲ್ಲಿ ಲಸಿಕೆಗಳ ದಾಸ್ತಾನು ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
‘ಆಜ್ ತಕ್’ ನೊಂದಿಗೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ತಮ್ಮ ಅಗತ್ಯಕ್ಕೆ ತಕ್ಕಂತೆ ಲಸಿಕೆಗಳನ್ನು ಪಡೆಯಬಹುದು ಎಂದು ರಾಜ್ಯಗಳಿಗೆ ತಿಳಿಸಲಾಗಿದೆ. ಯಾವುದೇ ರಾಜ್ಯ ಲಸಿಕೆಗಳ ಕೊರತೆ ಎದುರಿಸುವುದಕ್ಕೆ ಕೇಂದ್ರ ಸರಕಾರ ಅವಕಾಶ ನೀಡುವುದಿಲ್ಲ ಎಂದರು.
ಇನ್ನು 3 ದಿನಗಳಲ್ಲಿರಾಜ್ಯದಲ್ಲಿ ಕೋವಿಡ್-19 ಲಸಿಕೆ ಕೊರತೆ ಎದುರಾಗಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾಧ್ಯಮಗಳಿಗೆ ತಿಳಿಸಿದ ಕೆಲವೇ ಗಂಟೆಗಳ ಬಳಿಕ ಹರ್ಷ ವರ್ಧನ್ ಹೇಳಿಕೆ ಹೊರಬಂದಿದೆ.
ನಮ್ಮಲ್ಲಿ 14 ಲಕ್ಷ ಲಸಿಕೆ ಡೋಸ್ ಗಳಿವೆ. ಇದು ಮೂರನೇ ದಿನಗಳಲ್ಲಿ ಮುಗಿಯಬಹುದು. ನಮಗೆ ಪ್ರತಿ ವಾರ 40 ಲಕ್ಷ ಲಸಿಕೆ ಡೋಸ್ ಗಳ ಅಗತ್ಯವಿದೆ. ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ರೊಂದಿಗಿನ ಸಭೆಯಲ್ಲಿ ಈ ವಿಚಾರದ ಕುರಿತು ಕಳವಳ ವ್ಕಕ್ತಪಡಿಸಿದ್ದೆ ಎಂದು ರಾಜೇಶ್ ಹೇಳಿದ್ದಾರೆ.