ಬಾಂಬೆ ಹೈಕೋರ್ಟಿನ ಸಿಬಿಐ ತನಿಖೆ ಆದೇಶ ಪ್ರಶ್ನಿಸಿ ಅನಿಲ್ ದೇಶ್ ಮುಖ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

Update: 2021-04-08 11:35 GMT

ಹೊಸದಿಲ್ಲಿ: ತನ್ನ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿರುವ ಬಾಂಬೆ ಹೈಕೋರ್ಟ್ ನ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಸಲ್ಲಿಸಿರುವ ಅರ್ಜಿಯನ್ನು ಗುರುವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಇದೇ ಪ್ರಕರಣದಲ್ಲಿ ಮಹಾರಾಷ್ಟ್ರ ಸರಕಾರ ಸಲ್ಲಿಸಿರುವ ಇದೇ ರೀತಿಯ ಅರ್ಜಿಯನ್ನೂ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಪ್ರಾಥಮಿಕ ತನಿಖೆ ನಡೆಸಲು ಆದೇಶಿಸಿದೆ. ಇದರಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ.  ಇದೊಂದು ಕೇವಲ ಪ್ರಾಥಮಿಕ ತನಿಖೆಯಷ್ಟೇ. ಹಿರಿಯ ಅಧಿಕಾರಿಯೊಬ್ಬರು ಹಿರಿಯ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿರುವುದರಿಂದ ಈ ತನಿಖೆ ತಪ್ಪಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಮಾಜಿ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಅನಿಲ್ ದೇಶ್ ಮುಖ್ ವಿರುದ್ಧ ಮಾಡಿರುವ ಆರೋಪದ ವಿರುದ್ಧ ಸಿಬಿಐ ತನಿಖೆಗೆ ಸೋಮವಾರ ಬಾಂಬೆ ಹೈಕೋರ್ಟ್ ಅವಕಾಶ ನೀಡಿತ್ತು. ಈ ಆರೋಪದ ಕುರಿತು 15 ದಿನಗಳೊಳಗೆ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸುವಂತೆಯೂ ನ್ಯಾಯಾಲಯ ಆದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News