ನಾಲ್ಕು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಮಂತ್ರಿ ಪ್ರತ್ಯೇಕ ದೂರವಾಣಿ ಕರೆ
Update: 2021-05-08 13:43 GMT
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರತ್ಯೇಕ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಹಾಗೂ ಆ ರಾಜ್ಯಗಳಲ್ಲಿನ ಕೊರೋನ ವೈರಸ್ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಪ್ರಧಾನಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಗೆ ಡಯಲ್ ಮಾಡಿದರು.
ಕಳೆದ ವರ್ಷದಿಂದಲೇ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ರಾಜ್ಯವಾದ ಮಹಾರಾಷ್ಟ್ರವು ಹೊಸ ಸೋಂಕುಗಳ ಲ್ಲಿ ಇಳಿಕೆ ಕಂಡ ರಾಜ್ಯಗಳಲ್ಲಿದೆ ಒಂದಾಗಿದೆ ಎಂದು ಕೇಂದ್ರ ಆರೋಗ್ಯಸಚಿವಾಲಯ ಶುಕ್ರವಾರ ಹೇಳಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯವು 54,022 ಹೊಸ ಪ್ರಕರಣಗಳನ್ನು ದಾಖಲಿಸಿದೆ. ಇದೇ ಅವಧಿಯಲ್ಲಿ 898 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ.