ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ರಾಹುಲ್ ದ್ರಾವಿಡ್ ಕೋಚ್
Update: 2021-06-15 11:35 GMT
ಹೊಸದಿಲ್ಲಿ: ಶ್ರೀಲಂಕಾ ವಿರುದ್ಧ ಕಿರು ಸರಣಿಗೆ ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್ ತಂಡದ ತರಬೇತುದಾರರಾಗಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗುಲಿ ಖಚಿತಪಡಿಸಿದ್ದಾರೆ.
"ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ರಾಹುಲ್ ದ್ರಾವಿಡ್ ತರಬೇತುದಾರರಾಗಲಿದ್ದಾರೆ" ಎಂದು The Indian Express ಗೆ ಸೌರವ್ ಗಂಗುಲಿ ತಿಳಿಸಿದರು.
ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ ಕ್ರಿಕೆಟ್ ತಂಡವು ಮುಂಬೈನಲ್ಲಿ ಸೋಮವಾರದಿಂದ ತನ್ನ 14 ದಿನಗಳ ಸಾಂಸ್ಥಿಕ ಸಂಪರ್ಕ ತಡೆ( ಇನ್ ಸ್ಟಿಟ್ಯೂಶನಲ್ ಕ್ವಾರಂಟೈನ್ )ಯನ್ನು ಪ್ರಾರಂಭಿಸಿತು.
ದ್ರಾವಿಡ್ ಅವರು ಕಳೆದ ಕೆಲವು ವರ್ಷಗಳಿಂದ ಭಾರತದ ಅಂಡರ್ -19 ಹಾಗೂ ಭಾರತ 'ಎ' ತಂಡಗಳಿಗೆ ತರಬೇತಿ ನೀಡುತ್ತಿದ್ದಾರೆ ಹಾಗೂ ಭಾರತ ತಂಡದ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ.