ಡಿಪಿಐಐಟಿ ಕಾರ್ಯದರ್ಶಿ ಮಹಾಪಾತ್ರಾ ನಿಧನ‌

Update: 2021-06-19 14:46 GMT

ಹೊಸದಿಲ್ಲಿ, ಜೂ.19: ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ)ಯ ಕಾರ್ಯದರ್ಶಿ ಡಾ.ಗುರುಪ್ರಸಾದ್ ಮಹಾಪಾತ್ರಾ ಅವರು ಕೊರೋನ ಸೋಂಕಿನಿಂದ ಶನಿವಾರ ನಿಧನರಾದರು. ಕಳೆದ ಎಪ್ರಿಲ್ ನಲ್ಲಿ ಅವರನ್ನು ಇಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

2019, ಆಗಸ್ಟ್ ನಲ್ಲಿ ಡಿಪಿಐಐಟಿ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಮಹಾಪಾತ್ರಾ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1986ರ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದ ಅವರು ಈ ಹಿಂದೆ ವಾಣಿಜ್ಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಮತ್ತು ರಾಜ್ಯಮಟ್ಟದಲ್ಲಿ ಗುಜರಾತಿನ ಸೂರತ್ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಅವರು ಮಹಾಪಾತ್ರಾ ನಿಧನಕ್ಕೆ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News