ಪುದು: ಬೀದಿಬದಿ ವ್ಯಾಪಾರಿಗಳು, ಆಟೋ ಚಾಲಕರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

Update: 2021-06-28 15:00 GMT

ಬಂಟ್ವಾಳ, ಜೂ.28: ಶಾಸಕ ಯು.ಟಿ.ಖಾದರ್ ಅವರ ವಿಶೇಷ ಸೂಚನೆಯಂತೆ ಪುದು ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಬೀದಿಬದಿ ವ್ಯಾಪಾರಿಗಳು, ಅಟೋ ಚಾಲಕರು, ಕಾರ್ಮಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ ಸೋಮವಾರ ಫರಂಗಿಪೇಟೆ ಸೇವಾಂಜಲಿ ಕೇಂದ್ರದಲ್ಲಿ ನಡೆಯಿತು. 

ಕಾರ್ಯಕ್ರಮದಲ್ಲಿ ಬೀದಿ ಬದಿ ವ್ಯಾಪಾರಿಗಳು, ಅಟೋ ಚಾಲಕರು, ಕಾರ್ಮಿಕರು, ಹೊಟೇಲ್ ಕಾರ್ಮಿಕರಿಗೆ ಹಾಗೂ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 60 ಮಂದಿ ಕಾಲೇಜು ವಿದ್ಯಾರ್ಥಿಗಳು ಸೇರಿ ಒಟ್ಟು 350 ಮಂದಿ ಲಸಿಕೆ ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಪಂಚಾಯತ್ ಸದಸ್ಯರು, ಪಿಡಿಒ ಶ್ರೀ ಹರೀಶ್ ಕೆ.ಎ., ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಸೇವಾಂಜಲಿ ಕೇಂದ್ರದ ಮುಖ್ಯಸ್ಥ ಕೃಷ್ಣಕುಮಾರ್ ಪೂಂಜಾ, ಪುದು ಅರೋಗ್ಯ ಕೇಂದ್ರದ ಅರೋಗ್ಯಾಧಿಕಾರಿ ಡಾ. ಸುದರ್ಶನ್, ಸಿಬ್ಬಂದಿಯಾದ ರೋಹಿಣಿ, ಪ್ರಿಯಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಯಾದ ಮುಹಮ್ಮದ್ ಶರೀಫ್, ಅಬ್ದುಲ್ ಸಲಾಂ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News