ಉಡುಪಿ: ಮಂಗಳವಾರ ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ವಿವರ

Update: 2021-06-28 15:12 GMT

ಉಡುಪಿ, ಜೂ.28: ಜಿಲ್ಲೆಯಲ್ಲಿ ಜೂ.29 ಮಂಗಳವಾರದಂದು ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ.

ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9:30ರಿಂದ ಸಂಜೆ 4:30ರವರೆಗೆ ಜುಲೈ 5ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ 40 ಡೋಸ್ ಲಸಿಕೆ ಲಭ್ಯವಿರುತ್ತದೆ.

ಜಿಲ್ಲೆಯಲ್ಲಿರುವ ಪದವಿ, ಡಿಪ್ಲೋಮ ಹಾಗೂ ಐಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ಬೋಧಕ ಸಿಬ್ಬಂದಿಗಳಿಗೆ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್-19 ಲಸಿಕಾ ಶಿಬಿರವನ್ನು ಆಯಾ ಕಾಲೇಜುಗಳಲ್ಲಿ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿಗಳು ತಾವು ಕಲಿಯುತ್ತಿರುವ/ ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಅಥವಾ ಕಾಲೇಜಿನ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಿ ಲಭ್ಯವಿರುವ ಲಸಿಕಾ ಪ್ರಮಾಣವನ್ನು ಆಧರಿಸಿ ಲಸಿಕೀಕರಣವನ್ನು ಖಚಿತ ಪಡಿಸಿಕೊಂಡು ಲಸಿಕೆ ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿರುವ ಪದಲಿ, ಡಿಪ್ಲೋಮ ಹಾಗೂ ಐಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿ ಗಳು ತಾವು ಕಲಿಯುತ್ತಿರುವ/ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಹೊರತು ಪಡಿಸಿ ಬೇರೆ ಕಾಲೇಜುಗಳಲ್ಲಿ ಲಸಿಕೆಯನ್ನು ಪಡೆಯುವಂತಿಲ್ಲ. ಬೇರೆ ಜಿಲ್ಲೆಯ ಕಾಲೇಜುಗಳಲ್ಲಿ ಕಲಿಯುತ್ತಿರುವ ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿ ಗಳಿಗೆ ಲಸಿಕೆ ನೀಡುವ ಬಗ್ಗೆ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಲಾಗುವುದು.

ಜಿಲ್ಲೆಯಲ್ಲಿ 18ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News