ಫರಂಗಿಪೇಟೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Update: 2021-07-01 12:10 GMT

ಬಂಟ್ವಾಳ, ಜು.1: ಫರಂಗಿಪೇಟೆ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಗುರುವಾರ ಜಿಲ್ಲಾ ಪಂಚಾ ಯತ್ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ ಹಾಗೂ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರ ಉಪಸ್ಥಿತಿ ಯಲ್ಲಿ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮ್ಲಾನ್ ಕುಂಪನಮಜಲು, ಶಾಲಾ ಮುಖ್ಯ ಶಿಕ್ಷಕಿ ಶಕುಂತಳಾ ಉಳ್ಳಾಲ್, ಶಾಲಾ ಶಿಕ್ಷಕಿಯರಾದ ಪ್ರಭ, ಜ್ಯೋತಿ, ಶಾಲೆಟ್, ಹರ್ಷಿತಾ, ಸ್ಥಳೀಯ ಪ್ರಮುಖ ಮಜೀದ್ ಫರಂಗಿಪೇಟೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News