ಉಡುಪಿ: 146 ಮಂದಿಗೆ ಕೊರೋನ ಪಾಸಿಟಿವ್, ಮಹಿಳೆ ಬಲಿ

Update: 2021-07-01 15:47 GMT

ಉಡುಪಿ, ಜು.1: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 146 ಆಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ದಿನದಲ್ಲಿ 130 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿ ರುವವರ ಸಂಖ್ಯೆ 955ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಉಡುಪಿ ತಾಲೂಕಿನ 68 ವರ್ಷ ಪ್ರಾಯದ ಮಹಿಳೆಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ ಗುಣಲಕ್ಷಣದೊಂದಿಗೆ ಉಸಿರಾಟದ ತೊಂದರೆ, ನ್ಯುಮೋನಿಯಾದಿಂದ ನರಳುತಿದ್ದ ಇವರು ಹೃದಯ ಬೇನೆಯನ್ನು ಹೊಂದಿದ್ದು ಜೂ.26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಹುಅಂಗ ವೈಫಲ್ಯದಿಂದ ಅವರು ಇಂದು ಮೃತಪಟ್ಟರು. ಇದರಿಂದ ಜಿಲ್ಲೆಯಲ್ಲಿ ಮೃತರ ಸಂಖ್ಯೆ 394ಕ್ಕೇರಿದೆ.

ಇಂದು ಪಾಸಿಟಿವ್ ಬಂದ 146 ಮಂದಿಯಲ್ಲಿ 72 ಮಂದಿ ಪುರುಷರು ಹಾಗೂ 74 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 68, ಕುಂದಾಪುರ ತಾಲೂಕಿನ 40 ಹಾಗೂ ಕಾರ್ಕಳ ತಾಲೂಕಿನ 36 ಮಂದಿ ಅಲ್ಲದೇ ಹೊರಜಿಲ್ಲೆ ಗಳ ಇಬ್ಬರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 19 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 127 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಬುಧವಾರ 130 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 65,236ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2160 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 66,585 ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,85,396 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಇಬ್ಬರಲ್ಲಿ ಕಪ್ಪು ಶಿಲೀಂದ್ರ ಸೋಂಕು: ಹೊರಜಿಲ್ಲೆಯ ಇಬ್ಬರಲ್ಲಿ ಇಂದು ಹೊಸದಾಗಿ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಈಗ ಒಟ್ಟು ಐವರು ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ.

2,442 ಮಂದಿಗೆ ಕೋವಿಡ್ ಲಸಿಕೆ

ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 2,442 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 1,981 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 461 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 1757 ಮಂದಿ ಮೊದಲ ಡೋಸ್ ಹಾಗೂ 126 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 224 ಮಂದಿ ಮೊದಲ ಡೋಸ್ ಹಾಗೂ 335 ಮಂದಿ ಎರಡನೇ ಡೋಸ್ ನ್ನು ಪಡೆದಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 4,19,793 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 1,14,367 ಮಂದಿ ಎರಡನೇ ಡೋಸ್‌ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News