ಮೂಡುಬಿದಿರೆ : ಶ್ರೀ ಮಹಾವೀರ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ

Update: 2021-07-02 17:06 GMT

ಮೂಡುಬಿದಿರೆ: ಸಮುದಾಯ ಆರೋಗ್ಯ ಕೇಂದ್ರ ಮತ್ತು ಪುರಸಭೆ ಮೂಡುಬಿದಿರೆ ವತಿಯಿಂದ ಇಲ್ಲಿನ ಮಹಾವೀರ ಕಾಲೇಜಿನಲ್ಲಿ ಶುಕ್ರವಾರ 662 ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು.

ಮೂಡುಬಿದಿರೆ ಕೋವಿಡ್ ರಕ್ಷಾ ಸಮಿತಿ ಸದಸ್ಯ ಎಂ. ಬಾಹುಬಲಿ ಪ್ರಸಾದ್ ಮಾತನಾಡಿ ಕಾಲೇಜು ಆರಂಭಕ್ಕೆ ಮೊದಲು ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವ ಅಭಿಯಾನ ಪೂರ್ಣಗೊಳ್ಳಬೇಕೆಂಬ ಸರ್ಕಾರದ ಆದೇಶದಂತೆ ಮಹಾವೀರ ಕಾಲೇಜಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಳ್ವಾಸ್ ಮತ್ತು ಧವಲಾ ಕಾಲೇಜಿನಲ್ಲಿ ಈಗಾಗಲೇ ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಭಾರತದಲ್ಲಿ ಈಗಾಗಲೇ 32 ಕೋಟಿ ಮಂದಿಗೆ ಲಸಿಕೆ ನೀಡಲಾಗಿದ್ದು ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಸಾಧನೆ ಉತ್ತಮವಾಗಿದೆ ಎಂದರು.

ಕಾಲೇಜಿನ ವಿಶ್ವಸ್ಥ ಮಂಡಳಿ ಅಧ್ಯಕ್ಷ, ಮಾಜಿ ಸಚಿವ ಅಭಯಚಂದ್ರ ಜೈನ್, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಪದವಿ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ, ಪ.ಪೂ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್, ನೋಡೆಲ್ ಅಧಿಕಾರಿ ಸುಭಾಸ್, ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಮತ್ತಿತರರು ಉಪಸ್ಥಿತರಿದ್ದರು. ನಳಿನಿ ಸ್ವಾಗತಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News