ಉಡುಪಿ: ಶನಿವಾರ 101 ಮಂದಿಗೆ ಕೊರೋನ ಪಾಸಿಟಿವ್

Update: 2021-07-03 15:02 GMT

ಉಡುಪಿ, ಜು.3: ಜಿಲ್ಲೆಯಲ್ಲಿ ಶನಿವಾರ ಒಟ್ಟು 101 ಮಂದಿ ಹೊಸದಾಗಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ಸೋಂಕಿನಿಂದ ಇಂದು ಯಾರೂ ಮೃತಪಟ್ಟಿಲ್ಲ. ದಿನದಲ್ಲಿ 97 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 925 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 101 ಮಂದಿಯಲ್ಲಿ 54 ಮಂದಿ ಪುರುಷರು ಹಾಗೂ 47 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 36, ಕುಂದಾಪುರ ತಾಲೂಕಿನ 44 ಹಾಗೂ ಕಾರ್ಕಳ ತಾಲೂಕಿನ 18 ಮಂದಿ ಅಲ್ಲದೇ ಹೊರಜಿಲ್ಲೆ ಯ ಮೂವರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 7 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 94 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಶುಕ್ರವಾರ 97 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 65,457ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2486 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 66,777 ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,90,468 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಒಬ್ಬರಿಗೆ ಬ್ಲ್ಯಾಕ್ ಫಂಗಸ್ ಸೋಂಕು

ಬ್ಲಾಕ್ ಫಂಗಸ್ ಸೋಂಕಿನ ಚಿಕಿತ್ಸೆಗಾಗಿ ಇಂದು ಹೊರಜಿಲ್ಲೆಯ ಒಬ್ಬರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲೀಗ ಒಟ್ಟು 8 ಮಂದಿ ಕಪ್ಪು ಶಿಲೀಂದ್ರ ಸೋಂಕು ಹೊಂದಿದ್ದು, ಎಲ್ಲರೂ ಕೆಎಂಸಿ ುಣಿಪಾಲದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

14,451 ಮಂದಿಯಿಂದ ಕೋವಿಡ್ ಲಸಿಕೆ ಸ್ವೀಕಾರ

ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 14,451 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 4,151 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 10,300 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 3,287 ಮಂದಿ ಮೊದಲ ಡೋಸ್ ಹಾಗೂ 670 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 850 ಮಂದಿ ಮೊದಲ ಡೋಸ್ ಹಾಗೂ 9557 ಮಂದಿ ಎರಡನೇ ಡೋಸ್ ನ್ನು ಪಡೆದಿದ್ದಾರೆ. 76 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 11 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 4,27,955 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 1,29,428 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News