ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2021-07-05 16:08 GMT

ಉಡುಪಿ: ವಿಪರೀತ ಕುಡಿತದ ಚಟ ಹಾಗೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಿನ್ನಿಮೂಲ್ಕಿಯ ವಾಲ್ಟರ್ ಅಮ್ಮಣ್ಣ(70) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಜು.4ರಂದು ಸಂಜೆ ವೇಳೆ ಮನೆಯ ಬೆಡ್ ರೂಮಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದು ಜೂ.30ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೊಳಲಗಿರಿಯ ಸಂತಾನಿ ಡಿಸೋಜ ಎಂಬವರ ಮಗ ಆಲ್ವಿನ್ ಡಿಸೋಜ(40) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಜು.5ರಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News