ಮಂಗಳೂರು: ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ ಅಭಿಯಾನ

Update: 2021-07-06 12:44 GMT

ಮಂಗಳೂರು: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು.

ಜಿಲ್ಲಾ ಆರೋಗ್ಯ ಇಲಾಖೆಯ ಡಾ. ರಾಜೇಶ್, ಡಾ. ದೀಪ್ತಿ, ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಐಶ್ವರ್ಯ, ವಿಕಾಸ್ ಕಾಲೇಜ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ. ಅಜಯ್ ಠಾಕೂರ್, ವಿಕಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನಾ, ಸಂಸ್ಥೆಯ ಟ್ರಸ್ಟಿ ಜೆ. ಕೊರಗಪ್ಪ, ವಿಕಾಸ್ ಶಿಕ್ಷಣ ಸಂಸ್ಥೆಯ ಸಂಯೋಜಕರಾದ ಪಾರ್ಥಸಾರಥಿ ಜೆ. ಪಾಲೆಮಾರ್  ಅಭಿಯಾನವನ್ನು ಉದ್ಘಾಟಿಸಿದರು.

ಸಂಸ್ಥೆಯ ಪದವಿ ಹಾಗೂ ಫಿಜಿಯೋಥೆರಪಿ ವಿಭಾಗದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 150 ಮಂದಿ ಲಸಿಕೆ ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News