ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಕೊರೋನ ಪಾಸಿಟಿವ್

Update: 2021-07-06 15:58 GMT
ಸಾಂದರ್ಭಿಕ ಚಿತ್ರ

ಉಡುಪಿ, ಜು.6: ಜಿಲ್ಲೆಯಲ್ಲಿ ಮಂಗಳವಾರ 113 ಮಂದಿಯಲ್ಲಿ ಕೊರೋನ ಸೋಂಕು ದೃಢ ಪಟ್ಟಿದೆ. 81 ವರ್ಷ ಪ್ರಾಯದ ವೃದ್ಧರೊಬ್ಬರು ಸೋಂಕಿಗೆ ಬಲಿಯಾದರೆ, ದಿನದಲ್ಲಿ 71 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 878ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನದಿಂದ ಉಡುಪಿಯ 81 ವರ್ಷ ಪ್ರಾಯದ ವೃದ್ಧರೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 398ಕ್ಕೇರಿದೆ. ತೀವ್ರವಾದ ಕೋವಿಡ್ ಲಕ್ಷಣ, ಉಸಿರಾಟ ತೊಂದರೆಗಾಗಿ ಜು.3ಕ್ಕೆ ಆಸ್ಪತ್ರೆಗೆ ದಾಖಲಾದ ಇವರು ಚಿಕಿತ್ಸೆ ಫಲಕಾರಿಯಾಗದೇ ಜು.5ರಂದು ಮೃತಪಟ್ಟರು.

ಇಂದು ಪಾಸಿಟಿವ್ ದೃಢಪಟ್ಟ 113 ಮಂದಿಯಲ್ಲಿ 58 ಮಂದಿ ಪುರುಷರು ಹಾಗೂ 55 ಮಂದಿ ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 60, ಕುಂದಾಪುರ ತಾಲೂಕಿನ 34 ಹಾಗೂ ಕಾರ್ಕಳ ತಾಲೂಕಿನ 17 ಮಂದಿ ಹಾಗೂ ಹೊರಜಿಲ್ಲೆಗಳ ಇಬ್ಬರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 11 ಮಂದಿ ಆಸ್ಪತ್ರೆ ಹಾಗೂ 102 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಸೋಮವಾರ 71 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 65,748ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1458 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 67,0241 ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,97,115 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಬ್ಲಾಕ್ ಫಂಗಸ್ ಸೋಂಕಿಗಾಗಿ ಮಣಿಪಾಲದ ಕೆಎಂಸಿಯಲ್ಲಿ ಏಳು ಮಂದಿ ಚಿಕಿತ್ಸೆ ಪಡೆಯುತಿದ್ದಾರೆ.

3,695 ಮಂದಿಗೆ ಕೋವಿಡ್ ಲಸಿಕೆ
ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 3,695 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 1,665 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 2030 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 1214 ಮಂದಿ ಮೊದಲ ಡೋಸ್ ಹಾಗೂ 122 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 437 ಮಂದಿ ಮೊದಲ ಡೋಸ್ ಹಾಗೂ 1905 ಮಂದಿ ಎರಡನೇ ಡೋಸ್ ನ್ನು ಪಡೆದಿದ್ದಾರೆ. 10 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 7 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News