ಉಡುಪಿ: ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ತರಬೇತಿ

Update: 2021-07-07 17:52 GMT

ಉಡುಪಿ, ಜು.7: ರಾಜ್ಯ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಉಡುಪಿ ಇವರು ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ ಪ್ರಸಕ್ತ ಸಾಲಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದಡಿ ತರಬೇತಿಯನ್ನು ಹಮ್ಮಿಕೊಂಡಿದೆ.

ಜಿಲ್ಲೆಯ ಅರ್ಹ 18ರಿಂದ 40 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಮೊದಲನೇ ಮಹಡಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಅಲೆವೂರು ರಸ್ತೆ, ಮಣಿಪಾಲ, ಮೊ.ನಂ: 8217530146 ಅನ್ನು ಸಂಪರ್ಕಿಸುವಂತೆ ಸಿಡಾಕ್ ಜಂಟಿ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News