ಉಡುಪಿ: ಕೋವಿಡ್ ಗೆ ಇಬ್ಬರು ಬಲಿ; ಕೊರೋನ ಪಾಸಿಟಿವ್ ಸಂಖ್ಯೆಯಲ್ಲಿ ಹೆಚ್ಚಳ

Update: 2021-07-08 15:11 GMT

ಉಡುಪಿ, ಜು.8: ಜಿಲ್ಲೆಯಲ್ಲಿ ಗುರುವಾರ ಕೊರೋನ ಸೋಂಕು ದೃಢ ಪಟ್ಟವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಒಟ್ಟು 147 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 157 ಮಂದಿ ದಿನದಲ್ಲಿ ಚಿಕಿತ್ಸೆಯಿಂದ ಗುಣಮುಖ ರಾಗಿದ್ದಾರೆ. ಸೋಂಕಿಗೆ ಸಕ್ರಿಯ ರಾಗಿರುವವರ ಸಂಖ್ಯೆ 891 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ಇಬ್ಬರು ಹಿರಿಯ ನಾಗರಿಕರು ಕೊರೋನಕ್ಕೆ ಬಲಿಯಾಗಿದ್ದು, ಈ ಮೂಲಕ ಕೊರೋನ ಸಾಂಕ್ರಾಮಿಕ ಪ್ರಾರಂಭಗೊಂಡ ಬಳಿಕ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 400ಕ್ಕೇರಿದೆ. ಕುಂದಾಪುರ ತಾಲೂಕಿನ 87 ವರ್ಷ ಪ್ರಾಯ ಹಾಗೂ ಉಡುಪಿಯ 83 ವರ್ಷ ಪ್ರಾಯದ ಹಿರಿಯ ನಾಗರಿಕರು ಬುಧವಾರ ಖಾಸಗಿ ಆಸ್ಪತ್ರೆಗಳಲ್ಲಿ ಮೃತಪಟ್ಟರು. ಕೋವಿಡ್ ಗುಣಲಕ್ಷಣದೊಂದಿಗೆ ತೀವ್ರತರದ ಉಸಿರಾಟ ತೊಂದರೆಯಿಂದ ಬಳಲುತಿದ್ದ ಇವರು ಇತರ ದೈಹಿಕ ಸಮಸ್ಯೆಗಳಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.

ಗುರುವಾರ ಪಾಸಿಟಿವ್ ದೃಢಪಟ್ಟ 147 ಮಂದಿಯಲ್ಲಿ 70 ಮಂದಿ ಪುರುಷರು ಹಾಗೂ 77 ಮಂದಿ ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 49, ಕುಂದಾಪುರ ತಾಲೂಕಿನ 60 ಹಾಗೂ ಕಾರ್ಕಳ ತಾಲೂಕಿನ 38 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 12 ಮಂದಿ ಆಸ್ಪತ್ರೆ ಹಾಗೂ 135 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಬುಧವಾರ 157 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 65,980ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3164 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 67,271 ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,02,869 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಉಡುಪಿಯ ಒಬ್ಬರಲ್ಲಿ ಬ್ಲ್ಯಾಕ್ ಫಂಗಸ್

ಬಹುದಿನಗಳ ಬಳಿಕ ಉಡುಪಿಯ 67 ವರ್ಷ ಪ್ರಾಯದ ಪುರುಷರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದೆ. ಇವರೊಂದಿಗೆ ಚಿತ್ರದುರ್ಗದ ಒಬ್ಬರಲ್ಲೂ ಸೋಂಕು ಪತ್ತೆಯಾಗಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ.

ಈ ಮೂಲಕ ಜಿಲ್ಲೆಯ ಉಡುಪಿ ತಾಲೂಕಿನ ಐವರು ಹಾಗೂ ಕುಂದಾಪುರ ತಾಲೂಕಿನ 6 ಮಂದಿಯಲ್ಲಿ ಸೋಂಕು ಪತ್ತೆಯಾ ದಂತಾಗಿದೆ. ಇವರಲ್ಲಿ ಇಂದಿನ ಸೋಂಕಿತರನ್ನು ಬಿಟ್ಟು ಉಳಿದವರೆಲ್ಲಾ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಎಂಟು ಮಂದಿ ಸೋಂಕಿಗೆ ಚಿಕಿತ್ಸೆಯಲ್ಲಿದ್ದು ಇವರಲ್ಲಿ ಏಳು ಮಂದಿ ಹೊರಜಿಲ್ಲೆ ಯವರು. ಇವರೆಲ್ಲರೂ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

4,904 ಮಂದಿಗೆ ಕೋವಿಡ್ ಲಸಿಕೆ

ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 4,904 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 3,132 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 1,772 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 1819 ಮಂದಿ ಮೊದಲ ಡೋಸ್ ಹಾಗೂ 119 ಮಂದಿ ಎರಡನೇ ಡೋಸನ್ನು ಪಡೆದಿ ದ್ದಾರೆ. 45 ವರ್ಷ ಮೇಲಿನ 1,310 ಮಂದಿ ಮೊದಲ ಡೋಸ್ ಹಾಗೂ 1639 ಮಂದಿ ಎರಡನೇ ಡೋಸ್ ನ್ನು ಪಡೆದಿದ್ದಾರೆ. 6 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 11 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,37,313 ಮಂದಿ ಮೊದಲ ಡೋಸ್ ಹಾಗೂ 1,37,657 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News