​ಸಹಕಾರ ಸಚಿವಾಲಯಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಸಂತಸ

Update: 2021-07-08 15:40 GMT

ಉಡುಪಿ, ಜು.8: ಕೇಂದ್ರ ಸರಕಾರ ಪ್ರತ್ಯೇಕ ಸಹಕಾರ ಸಚಿವಾಲಯದ ಬೇಡಿಕೆಯನ್ನು ಈ ಬಾರಿ ಪುರಸ್ಕರಿಸಿ ಐತಿಹಾಸಿಕ ನಿರ್ಣಯ ಕೈಗೊಂಡಿರುವುದು ಸಹಕಾರಿಗಳಿಗೆ ಸಂತಸ ತಂದಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿ ಯನ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಜರ್ಮನಿ, ಜಪಾನ್‌ನಂತಹ ಆನೇಕ ದೇಶಗಳಲ್ಲಿ ಸಹಕಾರ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯವಿದ್ದು, ಕೃಷಿ ಪ್ರಧಾನ ದೇಶವಾದ ಭಾರತದಲ್ಲಿ ಈವರೆಗೂ ಕೇಂದ್ರದಲ್ಲಿ ಪ್ರತ್ಯೇಕ ಸಹಕಾರ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಜಿಲ್ಲಾ ಸಹಕಾರಿ ಯೂನಿ ಯನ್ ಮನವಿಗಳನ್ನು ಸಾಕಷ್ಟು ಬಾರಿ ಬಜೆಟ್ ಪೂರ್ವದಲ್ಲಿ ಪ್ರಧಾನ ಮಂತಿಮಂತ್ರಿಯವರಿಗೆ, ಹಣಕಾಸು ಸಚಿವರಿಗೆ, ಕೃಷಿ ಸಚಿವರಿಗೆ, ಜಿಲ್ಲೆಯ ಸಂಸದರಿಗೆ ಸಲ್ಲಿಸಿದೆ.

ಕೇಂದ್ರದಲ್ಲಿ ಆದಾಯ ತೆರಿಗೆ ವಿನಾಯಿತಿ ಸೇರಿದಂತೆ ಸಹಕಾರ ಕ್ಷೇತ್ರಕ್ಕೆ ದೊರಕಬೇಕಾದ ಸೌಲಭ್ಯಗಳು ದೊರಕಿ, ಸಹಕಾರ ಕ್ಷೇತ್ರ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂಬುದು ಸಹಕಾರಿಗಳ ಆಶಯವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News