ಕಡಬ: ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಕಾಡಾನೆ

Update: 2021-07-11 10:43 GMT

ಕಡಬ, ಜು.11. ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ರವಿವಾರ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ.

ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News