ಜು.12ರಂದು ಉಡುಪಿ ಜಿಲ್ಲೆಯ ಕೋವಿಡ್ ಲಸಿಕೆ ಲಭ್ಯತೆ ವಿವರ

Update: 2021-07-11 15:16 GMT

ಉಡುಪಿ, ಜು.11: ಉಡುಪಿ ಜಿಲ್ಲೆಯಲ್ಲಿ ಜು.12ರಂದು ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯತೆ ವಿವರ ಈ ರೀತಿ ಇದೆ.

ಅಜ್ಜರಕಾಡು ಜಿಲ್ಲಾಸ್ಪತ್ರೆ(ಸೇಂಟ್ ಸಿಸಿಲಿ ಶಾಲೆ)ಯಲ್ಲಿ ಎರಡನೇ ಡೋಸ್ ಕೋವಿಶೀಲ್ಡ್-130, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ (ಮಾಧವ ಕೃಪಾ ಶಾಲೆ, ಮಣಿಪಾಲ)ದಲ್ಲಿ 2ನೆ ಡೋಸ್ ಕೋವಿಶೀಲ್ಡ್ -100, ಕೋವ್ಯಾಕ್ಸಿನ್ 2ನೇ ಡೋಸ್-150, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ(ಅಲಂಕಾರ್ ಥೀಯೇಟರ್ ಹತ್ತಿರ)ದಲ್ಲಿ 2ನೆ ಡೋಸ್ ಕೋವಿಶೀಲ್ಡ್- 250, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ(ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿ)ಯಲ್ಲಿ 2ನೇ ಡೋಸ್ ಕೋವ್ಯಾಕ್ಸಿನ್-150, ಕುಕ್ಕಿಕಟ್ಟೆ ಎಫ್‌ಪಿಎಐ(ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ)ಯಲ್ಲಿ 2ನೇ ಡೋಸ್ ಕೋವಿಶೀಲ್ಡ್ -70, ಕೋವ್ಯಾಕ್ಸಿನ್ 2ನೇ ಡೋಸ್ -20, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ(ಬಿ.ಆರ್.ಎಸ್)ಆಸ್ಪತ್ರೆಯಲ್ಲಿ ಜು.15ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲಭ್ಯ ಇದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಪಲಾನುವಿಗಳು/ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿ ರುವ ಮುಂಚೂಣಿ ಕಾರ್ಯಕರ್ತರು ಹಾಗೂ 45ವರ್ಷ ಮೇಲ್ಪಟ್ಟ ಸಾರ್ವ ಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲ್ಯವಿರುವುದಿಲ್ಲ. ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್- 19 ಲಸಿಕೆ ಲ್ಯವಿರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News