ಜು.14ರಿಂದ ಪಿಲಿಕುಳ ನಿಸರ್ಗಧಾಮ ಸಾರ್ವಜನಿಕ ವೀಕ್ಷಣೆಗೆ ಲಭ್ಯ

Update: 2021-07-12 14:45 GMT

ಮಂಗಳೂರು, ಜು.12: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಲೇಕ್‌ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ ಮತ್ತು ವಿಜ್ಞಾನಕೇಂದ್ರ ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗಿ ಜು.14ರಿಂದ ತೆರೆಯಲಾಗುತ್ತದೆ.

ಸರಕಾರದ ಆದೇಶದಂತೆ ವೀಕ್ಷಕರು ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವೀಕ್ಷಿಸಬಹುದು ಎಂದು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್ ಜಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News