ದ.ಕ. ಜಿಲ್ಲಾದ್ಯಂತ ಧಾರಾಕಾರ ಮಳೆ

Update: 2021-07-13 07:49 GMT

ಮಂಗಳೂರು, ಜು.13: ದ.ಕ. ಜಿಲ್ಲಾದ್ಯಂತ ಇಂದು ಬೆಳಗ್ಗಿನಿಂದ ಸತತವಾಗಿ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ತಪ್ಪಲಿನಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಜೀವನಾಡಿಯಂತಿರುವ ನೇತ್ರಾವತಿ, ಫಲ್ಗುಣಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

ಮಂಗಳೂರು ನಗರ ಮತ್ತು ಹೊರವಲಯದ ಕೆಲವೆಡೆ ಮರಗಳು ಧರೆಗೆ ಉರುಳಿವೆ. ಹಲವೆಡೆ ಮನೆಯೊಳಗೆ ನೀರು ನುಗ್ಗಿವೆ. ಆದರೆ ಈವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

ನಗರದ ಜೆಪ್ಪಿನಮೊಗರು ಬಳಿ ವಿಕಲಚೇತನ ಮಹಿಳೆಯೊಬ್ಬರ ಮನೆಗೆ ನೀರು ನುಗ್ಗಿರುವುದು ವರದಿಯಾಗಿದೆ. ನಗರದಲ್ಲೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗೆ ಮಳೆ ಅಡ್ಡಿಯಾಗಿದೆ. ಮಳೆ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿತ್ತು. ಅಲ್ಲದೆ ಸಂಚಾರ ದಟ್ಟಣೆಯಿಂದ ಜನರ ಓಡಾಟಕ್ಕೆ ಭಾರೀ ಸಮಸ್ಯೆಯಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News