ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಬುಧವಾರ ಉಡುಪಿಗೆ

Update: 2021-07-13 13:07 GMT

ಉಡುಪಿ, ಜು.13: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ರಕ್ಷಾ ರಾಮಯ್ಯ ಅವರು ನಾಳೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಬೆಳಗ್ಗೆ 10:30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ರಕ್ಷಾ ರಾಮಯ್ಯ ಅವರೊಂದಿಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಲ್ ಯಾದವ್, ವಿಜ್ಯಾಬಾಲಕೃಷ್ಣನ್, ಸುರಭಿ ದ್ವಿವೇದಿ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಕೆ.ಆರ್., ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾವ ಯುವ ಕಾಂಗ್ರೆಸ್ ಉಸ್ತುವರಿ ಹನುಮ ಕಿಶೋರ್, ರಾಜ್ಯ ಕಾರ್ಯದರ್ಶಿ ದೀಪಿಕಾ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಜ್ಯೋತಿಷ್ ಮನ್ನಾರ್‌ಮನ್ನನ್ ಅವರು ಸಹ ಉಡುಪಿಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News