ಉಡುಪಿ: ನಾಟಕ ಕಲಾವಿದರಿಗೆ ಆಹಾರದ ಕಿಟ್ ವಿತರಣೆ

Update: 2021-07-13 13:34 GMT

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಪ್ರವರ ಹಾಗೂ ಅಶ್ವಘೋಷ ಥಿಯೇಟರ್ ಬೆಂಗಳೂರು ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 16 ನಾಟಕ ಕಲಾವಿದರಿಗೆ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.

ಉಡುಪಿಯ ವಿವಿಧ ನಾಟಕ ತಂಡದ ಕಲಾವಿದರಿಗೆ ರೋಟರಿ ಮಣಿಪಾಲ್ ಅಧ್ಯಕ್ಷ ಮನೋರೋಗ ತಜ್ಞ ಡಾ.ವಿರೂಪಾಕ್ಷ ದೇವರಮನೆ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ವಿಶ್ವನಾಥ ಶೆಣಿೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಸಮಿತ್ರ ಕೆರೆಮಠ, ರೂಪಶ್ರೀ ರಾಜೇಶ್, ಸಂಚಾಲಕ ರವಿರಾಜ್ ಎಚ್.ಪಿ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News