'ಆಳ್ವಾಸ್‌'ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್‌ಗೆ ಆಯ್ಕೆ

Update: 2021-07-14 07:44 GMT
ಧನಲಕ್ಷ್ಮೀ (ಎಡಚಿತ್ರ), ಶುಭಾ

ಮೂಡುಬಿದಿರೆ, ಜು.14: ಈ ತಿಂಗಳ 23ರಿಂದ ಜಪಾನಿನ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸುವ ತಂಡದಲ್ಲಿ  ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮೀ ಹಾಗೂ ಶುಭಾ ಆಯ್ಕೆಯಾಗಿದ್ದು, ಇವರು 4x400 ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಕೂಟಗಳಲ್ಲಿ ಪ್ರತಿನಿಧಿಸಿರುವ ಇವರಿಬ್ಬರು ಈಗಾಗಲೇ ಅನೇಕ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿದ್ದಾರೆ.

ಒಲಿಂಪಿಕ್ಸ್‌ಗೆ ಆಯ್ಕೆಯಾದ ಇಬ್ಬರು ಈ ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಲಾ ಒಂದು ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಿದ್ದಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News