ಉಡುಪಿ : 110 ಮಂದಿಗೆ ಕೊರೋನ ಪಾಸಿಟಿವ್, ವೃದ್ಧೆ ಬಲಿ

Update: 2021-07-15 15:09 GMT

ಉಡುಪಿ, ಜು.15: ಗುರುವಾರ ಜಿಲ್ಲೆಯಲ್ಲಿ 110 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದು, 80 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ದಿನದಲ್ಲಿ 97 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿ ರುವವರ ಸಂಖ್ಯೆ 442ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿಗೆ ಕುಂದಾಪುರದ 80ರ ಹರೆಯದ ಮಹಿಳೆ ಯೊಬ್ಬರು ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಜಿಲ್ಲೆಯಲ್ಲಿ ಮೃತರ ಸಂಖ್ಯೆ 403ಕ್ಕೇರಿದೆ. ಕೋವಿಡ್ ಗುಣಲಕ್ಷಣದೊಂದಿಗೆ ಉಸಿರಾಟದ ತೊಂದರೆಗಾಗಿ ಈ ಮಹಿಳೆ ಜು.13ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವಿವಿಧ ಆರೋಗ್ಯ ಸಮಸ್ಯೆಗಳಿಂದ ಮರುದಿನ ಮೃತಪಟ್ಟಿದ್ದರು.

ಇಂದು ಕೊರೋನ ಪಾಸಿಟಿವ್ ದೃಢಪಟ್ಟ 110 ಮಂದಿಯಲ್ಲಿ 45 ಮಂದಿ ಪುರುಷರು ಹಾಗೂ 65 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 41, ಕುಂದಾಪುರ ತಾಲೂಕಿನ 36, ಕಾರ್ಕಳ ತಾಲೂಕಿನ 33 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 17 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 93 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಬುಧವಾರ 97 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 66,652ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3593 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 67,999ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,25,834 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಬ್ಲಾಕ್‌ಫಂಗಸ್ ಸೋಂಕಿಗಾಗಿ ಜಿಲ್ಲೆಯಲ್ಲಿ ಏಳು ಮಂದಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

5,974 ಮಂದಿಗೆ ಕೋವಿಡ್ ಲಸಿಕೆ

ಉಡುಪಿ ಜಿಲ್ಲೆಯಲ್ಲಿ ಗುರುವಾರ 5,974 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 3670 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 2,304 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 2,075 ಮಂದಿ ಮೊದಲ ಡೋಸ್ ಹಾಗೂ 146 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 1,570 ಮಂದಿ ಮೊದಲ ಡೋಸ್ ಹಾಗೂ 2,147 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 11 ಮಂದಿ ಆರೋಗ್ಯ ಕಾರ್ಯ ಕರ್ತರು ಹಾಗೂ 25 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 4,56,159 ಮಂದಿ ಲಸಿಕೆಯ ಮೊದಲ ಡೋಸ್ ನ್ನು ಪಡೆದರೆ, 1,56,065 ಮಂದಿ ಎರಡನೇ ಡೋಸ್‌ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News