ದ.ಕ. ಜಿಲ್ಲೆ: ಕೋವಿಡ್‌ಗೆ ಐವರು ಬಲಿ; 218 ಮಂದಿಗೆ ಸೋಂಕು

Update: 2021-07-17 16:16 GMT

ಮಂಗಳೂರು, ಜು.17: ದ.ಕ. ಜಿಲ್ಲೆಯಲ್ಲಿ ಶನಿವಾರ 218 ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 200 ಮಂದಿ ಗುಣಮುಖರಾಗಿ ದ್ದಾರೆ. ಐವರು ಮೃತಪಟ್ಟಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.2.89ರಷ್ಟಿದೆ.

ಇದುವರೆಗೆ ಜಿಲ್ಲೆಯಲ್ಲಿ 96,658 ಪಾಸಿಟಿವ್ ಪ್ರಕರಣಗಳ ಪೈಕಿ, 93,316 ಮಂದಿ ಗುಣಮುಖರಾಗಿದ್ದಾರೆ. 1362 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 1980 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದುವರೆಗೆ ಒಟ್ಟು 80,899 ಮಾಸ್ಕ್ ಉಲ್ಲಂಘನೆ ಪ್ರಕರಣಗಳ ಪೈಕಿ 98,57,117 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News