ದ.ಕ. ಜಿಲ್ಲೆ : ಕೋವಿಡ್‌ಗೆ ಮೂವರು ಬಲಿ; 229 ಮಂದಿಗೆ ಕೊರೋನ ಸೋಂಕು

Update: 2021-07-22 14:30 GMT

ಮಂಗಳೂರು, ಜು.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 229 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

215 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಮೂರು ಮಂದಿ ಸೋಂಕಿಗೆ ಬಲಿಯಾಗಿದ್ದು, ಶೇ.3.18 ಪಾಸಿಟಿವಿಟಿ ದರ ದಾಖಲಾಗಿದೆ.

ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 97,644ಕ್ಕೆ ಏರಿಕೆಯಾಗಿದೆ. ಈ ಪೈಕಿ 1,967 ಸಕ್ರಿಯ ಪ್ರಕರಣಗಳು. 94,293 ಸೋಂಕಿತರು ಗುಣಮುಖರಾಗಿದ್ದಾರೆ. 1,384 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 81,442 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 99,19,517 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News