ದ.ಕ. ಜಿಲ್ಲೆ : ಕೋವಿಡ್‌ಗೆ ಐದು ಬಲಿ; 337 ಮಂದಿಗೆ ಕೊರೋನ ಸೋಂಕು

Update: 2021-07-28 16:24 GMT

ಮಂಗಳೂರು, ಜು.28: ದ.ಕ. ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ನಿಂದಾಗಿ ಐವರು ಮೃತಪಟ್ಟಿದ್ದಾರೆ. ಅಲ್ಲದೆ, ಹೊಸದಾಗಿ 337 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ 148 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್‌ನಿಂದಾಗಿ ಜಿಲ್ಲೆಯಲ್ಲಿ ಒಟ್ಟು 1,402 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 99,264 ಪಾಸಿಟಿವ್ ಪ್ರಕರಣಗಳು ವರದಿ ಯಾಗಿವೆ. ಈ ಪೈಕಿ 95,499 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2,363 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News