ದ.ಕ. ಜಿಲ್ಲೆ : ಕೋವಿಡ್‌ ಗೆ ಮೂರು ಬಲಿ; 337 ಮಂದಿಗೆ ಸೋಂಕು

Update: 2021-08-05 17:02 GMT

ಮಂಗಳೂರು, ಆ. 5: ದ.ಕ. ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ ಮೂವರು ಕೋವಿಡ್‌ಗೆ ಬಲಿಯಾಗಿದ್ದು, 337 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.3.71ಕ್ಕೆ ಇಳಿಕೆಯಾಗಿದೆ.

ಜಿಲ್ಲೆಯಲ್ಲಿ ಗುರುವಾರ 213 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 97,328 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,01,993 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ 1,452 ಮಂದಿ ಮೃತಪಟ್ಟಿದ್ದು, 3213 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News